ಅಭಿಪ್ರಾಯ / ಸಲಹೆಗಳು

ನಮ್ಮ ಉದ್ದೇಶಗಳು

ನಮ್ಮ ಉದ್ದೇಶಗಳು

Objective
  • 0-6 ವರ್ಷದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬುನಾದಿ ಹಾಕುವುದಲ್ಲದೆ, ಪೂರಕ ಪೌಷ್ಠಿಕ ಆಹಾರ, ಅನೌಪಚಾರಿಕ ಶಾಲಾ ಪೂರ್ವ ಶಿಕ್ಷಣ, ಮಕ್ಕಳ ಆರೋಗ್ಯ ಹಾಗೂ ಪೌಷ್ಠಿಕತೆಯ ಬಗ್ಗೆ ತಾಯಂದಿರಿಗೆ ತರಬೇತಿ ಹಾಗೂ ಅರಿವು ಮೂಡಿಸುವುದರ ಬಗ್ಗೆ ಒತ್ತು ನೀಡುವುದು.

  • 11-18 ವರ್ಷದ ಪ್ರಾಯ ಪೂರ್ವ ಬಾಲಕಿಯರ ಸಬಲೀಕರಣಕ್ಕಾಗಿ ಆರೋಗ್ಯ, ಪೌಷ್ಠಿಕತೆ ಹಾಗೂ ಕೌಶಲ್ಯ ಆಧಾರಿತ ಶಿಕ್ಷಣ ನೀಡುವುದು.

  • ಪಾಲನೆ ಮತ್ತು ಪೋಷಣೆ ಅಗತ್ಯವಿರುವ ಹಾಗೂ ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸುರಕ್ಷಿತವಾದ ವಾತಾವರಣವನ್ನು ಕಲ್ಪಿಸುವುದು.

  • ಬಾಲ್ಯ ವಿವಾಹವನ್ನು ತಡೆಗಟ್ಟಲು ಹಾಗೂ ಬಾಲ್ಯ ವಿವಾಹದಿಂದ ಆಗುವ ಪರಿಣಾಮದ ಬಗ್ಗೆ ಅರಿವು ಮೂಡಿಸುವುದು, ಹೆಣ್ಣು ಮಗುವಿನ ವಿರುದ್ಧವಿರುವ ಪಕ್ಷಪಾತವನ್ನು ಹೋಗಲಾಡಿಸುವುದು, ಇಳಿಯುತ್ತಿರುವ ಲಿಂಗ ಪ್ರಮಾಣವನ್ನು ಸರಿಪಡಿಸುವುದು ಹಾಗೂ ಸಾಮಾಜಿಕ ಪಿಡುಗುಗಳ ನಿರ್ಮೂಲನೆ.

  • ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವುದು.

  • ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸಬಲೀಕರಣ.

  • ಕೌಟುಂಬಿಕ/ ಸಾಮಾಜಿಕ ಬೆಂಬಲವಿಲ್ಲದ, ಪ್ರತ್ಯೇಕ ಆದಾಯವಿಲ್ಲದ, ಖಂಡನೆಗಳಿಗೆ ಅವಕಾಶವಿರುವಂತಹ ಮಹಿಳೆಯರಿಗೆ ನೆರವು ಹಾಗೂ ಪುನರ್ವಸತಿ ಕಲ್ಪಿಸುವುದು.

  • ಮಹಿಳಾ ಉದ್ದೇಶಿತ ಆಯವ್ಯಯವನ್ನು ನಿಗದಿಪಡಿಸುವ ಮೂಲಕ ಮಹಿಳೆಯರ ಪರ ನೀತಿ/ಯೋಜನೆ/ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಲಿಂಗತ್ವ ಸಮಾನತೆಯನ್ನು ಪಡೆಯುವುದು.

  • ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣವನ್ನು ನಿಶ್ಚಯಪಡಿಸುವುದು.

  • ರಾಜ್ಯ ಸಮಾಜ ಕಲ್ಯಾಣ ಮಂಡಳಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜಾಲದ ಮೂಲಕ ಮಹಿಳೆಯರನ್ನು ಹಾಗೂ ಮಕ್ಕಳನ್ನು ಬೆಂಬಲಿಸುವ ಸೇವೆಗಳನ್ನು ಒದಗಿಸುವುದು.

  • ದುಡಿಯುವ ಮಹಿಳೆಯರ ಮಕ್ಕಳಿಗಾಗಿ ರಾಜೀವ್ಗಾಂಧಿ ಶಿಶುಪಾಲನಾ ಕೇಂದ್ರ ಯೋಜನೆಯ ಅನುಷ್ಠಾನ ಹಾಗೂ ತಿದ್ದುಪಡಿ.

  • ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣ ಯೋಜನೆಗಳನ್ನು ಅನುಷ್ಟಾನಗೊಳಿಸುವುದು

  • ಮಹಿಳಾ ಆಯೋಗದ ಮೂಲಕ ನ್ಯಾಯ ದೊರಕಿಸುವ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಹಿಳೆಯರನ್ನು ಸಬಲೀಕರಿಸುವುದು.

  • ಬಾಲ ವಿಕಾಸ ಅಕಾಡೆಮಿ ಹಾಗೂ ಬಾಲಭವನಗಳ ಮೂಲಕ ಮಕ್ಕಳಲ್ಲಿ ಹುದುಗಿರುವ ಸೃಜನಾತ್ಮಕ ಪ್ರತಿಭೆಯನ್ನು ಹೊರಹೊಮ್ಮಲು ಕ್ರಿಯಾತ್ಮಕ, ಸೃಜನಾತ್ಮಕ ಹಾಗೂ ಮನರಂಜನಾ ಕಾರ್ಯಕ್ರಮಗಳ ಅನುಷ್ಟಾನಗೊಳಿಸುವುದು.

ಇತ್ತೀಚಿನ ನವೀಕರಣ​ : 26-02-2021 10:32 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ನಿರ್ದೇಶನಾಲಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080