ಅಭಿಪ್ರಾಯ / ಸಲಹೆಗಳು

ಸಂಘಟನೆ

ಸಂಘಟನೆ

ಅ. ರಾಜ್ಯ ಮಟ್ಟದಲ್ಲಿ

ರಾಜ್ಯ ಮಟ್ಟದಲ್ಲಿ ಭಾರತೀಯ ಆಡಳಿತ ಸೇವಾ ವೃಂದದ ಅಧಿಕಾರಿಗಳು ಇಲಾಖೆಯ ನಿರ್ದೇಶಕರಾಗಿರುತ್ತಾರೆ. ನಿರ್ದೇಶನಾಲಯದಲ್ಲಿ ಇರುವ 5 ಶಾಖೆಗಳ ಜಂಟಿ / ಯೋಜನಾ ನಿರ್ದೇಶಕರುಗಳು ನಿರ್ದೇಶಕರಿಗೆ ಆಡಳಿತದಲ್ಲಿ ಸಹಕರಿಸುತ್ತಾರೆ.
1. ಆಡಳಿತ 2. ಸಮಗ್ರ ಶಿಶು ಅಭಿವೃದ್ಧಿ ಯೋಜನೆ 3. ಕಾರ್ಯಕ್ರಮ ಅಭಿವೃದ್ಧಿ ಮತ್ತು ಉಸ್ತುವಾರಿ ಘಟಕ/ಮಕ್ಕಳ ಕಲ್ಯಾಣ/ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಉಸ್ತುವಾರಿ ಕೋಶ 4. ಸ್ತ್ರೀಶಕ್ತಿ / ಮಹಿಳಾ ಕಲ್ಯಾಣ 5. ಸಮಗ್ರ ಮಕ್ಕಳ ರಕ್ಷಣಾ ಯೋಜನೆ

ಆ. ಜಿಲ್ಲಾ ಮಟ್ಟದಲ್ಲಿ

ಜಿಲ್ಲಾ ವಲಯ ಯೋಜನೆಗಳ ಅನುಷ್ಠಾನವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಉಪ ನಿರ್ದೇಶಕರುಗಳ ಮೂಲಕ ಮಾಡಲಾಗುತ್ತಿದೆ. ಇವರಿಗೆ ಇಲಾಖೆಯ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಕ್ರಮವಾಗಿ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ನಿರೂಪಣಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳು ಸಹಕರಿಸುತ್ತಾರೆ.
ರಾಜ್ಯ ವಲಯ ಯೋಜನೆಗಳನ್ನು ನೇರವಾಗಿ ಜಿಲ್ಲೆಯ ಉಪ ನಿರ್ದೇಶಕರುಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ಇ. ತಾಲ್ಲೂಕು ಮಟ್ಟದಲ್ಲಿ

ತಾಲ್ಲೂಕು ಮಟ್ಟದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮತ್ತು ಇತರೆ ಕಾರ್ಯಕ್ರಮಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅನುಷ್ಠನಗೊಳಿಸಲಾಗುತ್ತಿದ್ದಾರೆ. ಅವರಿಗೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಿಕೆಯರು ಹಾಗೂ ಇತರೆ ಸಿಬ್ಬಂದಿಗಳು ಸಹಕರಿಸುತ್ತಾರೆ. ಗ್ರಾಮ/ವಾರ್ಡ್ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಹಕರಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 26-02-2021 10:32 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ನಿರ್ದೇಶನಾಲಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080